ಹಳ್ಳಿಗಳ ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ಬುಧವಾರ, 29 ಜೂನ್ 2016 (18:24 IST)
ದೇಶದಲ್ಲಿ ಆರು ಲಕ್ಷ ಹಳ್ಳಿಗಳಿದ್ದು, ರಾಜ್ಯದಲ್ಲಿ 29 ಸಾವಿರ ಹಳ್ಳಿಗಳಿವೆ. ಹಳ್ಳಿಗಳನ್ನು ಅಭಿವೃದ್ಧಿ ಪಡಿಸಿದರೆ ದೇಶವನ್ನು ನಿಜವಾಗಿಯೂ ಅಭಿವೃದ್ಧಿಪಡಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ರಾಜ್ಯದ ಜನತೆ ನಮಗೆ ಮತ ನೀಡಿ ಅಧಿಕಾರ ಕೊಟ್ಟಿದ್ದಾರೆ. ಅಧಿಕಾರವನ್ನು ಸಮಾಜದ ಏಳಿಗೆಗಾಗಿ ಸದ್ವಿನಿಯೋಗ ಪಡಿಸಿಕೊಳ್ಳಬೇಕು ಅಂದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
 
ನಗರೀಕರಣದಿಂದ ಹಳ್ಳಿಗಳ ಶೇ.30 ರಷ್ಟು ಜನರು ನಗರಗಳಿಗೆ ವಲಸೆ ಬಂದಿದ್ದಾರೆ. ಇನ್ನೂ ಹಳ್ಳಿಗಳಲ್ಲಿ ಶೇ.70 ರಷ್ಟು ಜನರು ವಾಸಿಸುತ್ತಿದ್ದಾರೆ. ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಶುದ್ದವಾದ ಕುಡಿಯುವ ನೀರು, ರಸ್ತೆ, ಆಸ್ಪತ್ರೆ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
 
ಇಟ್ಟ ಗುರಿ ದಿಟ್ಟ ಹೆಜ್ಜೆ ಸಮಾನತೆಯ ಸಂಕಲ್ಪದ ಹಾದಿ ಪುಸ್ತಕವನ್ನು ರಾಜ್ಯದ ಗ್ರಂಥಾಲಯಗಳಿಗೆ ಕಡ್ಡಾಯವಾಗಿ ಸರಬರಾಜು ಮಾಡುವಂತೆ ಸುತ್ತೋಲೆ ಹೊರಡಿಸಿದ್ದೇನೆ ಎನ್ನುವ  ವರದಿಯಲ್ಲಿ ಸತ್ಯಾಂಶವಿಲ್ಲ. ನಾನು ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ,  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ