ಮೈಸೂರು: ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅವರು ನೀಡಿದ ದೂರಿನ ಆಧಾರದ ಮೇಲೆ ಇಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಪಡೆದ ಸೈಟ್ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪಿಸಿದ್ದರು. ಹೀಗಾಗಿ ಸ್ನೇಹಮಯಿ ಕೃಷ್ಣ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ದೂರಿ, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಎಂ.ಲಕ್ಷ್ಮಣ ನೀಡಿದ ದೂರಿನ ಅನ್ವಯ ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.