ಮದ್ದೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರ ಜನ್ಮದಿನದ ಅಂಗವಾಗಿ ಮಂಡ್ಯ ನಗರದಲ್ಲಿ ಡಿ.15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಈ ಬಗ್ಗೆ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಪ್ರತಿಕ್ರಿಯಿಸಿ, ಮಂಡ್ಯ ನಗರದಲ್ಲಿ ಡಿ.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವುದರಿಂದ ಈ ಕಾರಣಕ್ಕಾಗಿ ಡಿ.15ರಂದು ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಕಾರ್ಯಕ್ರಮವನ್ನು ಮುಂದೂಡಿ ಎಂದು ಸ್ವತಃ ಎಚ್.ಡಿ.ಕುಮಾರಸ್ವಾಮಿಯವರೇ ಸೂಚನೆ ಕೊಟ್ಟ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಗೊಂದಲ ಬೇಡ ಎಂಬ ಕಾರಣಕ್ಕೆ ಮುಂದೂಡಲಾಗಿದೆ. ಬೇರೆ ಯಾವ ಕಾರಣವೂ ಇಲ್ಲ ಎಂದರು.