ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ; ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಜಯ

ಮಂಗಳವಾರ, 6 ನವೆಂಬರ್ 2018 (13:07 IST)
ಬೆಂಗಳೂರು: ನವೆಂಬರ್ 3ರಂದು ನಡೆದ ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯ ಸಾಧಿಸಿದ್ದರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ.


ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಜಯಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಹೀನಾಯ ಸೋಲು ಕಂಡಿದ್ದಾರೆ. ಹಾಗೇ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್. ಆರ್. ಶಿವರಾಮೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.


ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಭಾರೀ ಗೆಲುವು ಸಾಧಿಸುವ ಮೂಲಕ ರಾಮನಗರ ಕ್ಷೇತ್ರದ ಮೊದಲ ಮಹಿಳಾ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಆನಂದ ನ್ಯಾಮಗೌಡರು ಬಿಜೆಪಿಯ ಶ್ರೀಕಾಂತ ಕುಲಕರ್ಣಿ ವಿರುದ್ಧ ಗೆಲುವು ಸಾಧಿಸಿದ್ದಾರೆ.


ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ ಎಸ್ ವೈ ಪುತ್ರ ಬಿಜೆಪಿಯ ಬಿ.ವೈ. ರಾಘವೇಂದ್ರ ಜಯಸಾಧಿಸಿದ್ದು, ಜೆಡಿಎಸ್ ನ ಮಧು ಬಂಗಾರಪ್ಪ ಸ್ವ ಕ್ಷೇತ್ರದಲ್ಲೆ ಹಿನ್ನಡೆ ಅನುಭವಿಸಿ ಸೋಲನ್ನು ಕಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ