ಬೆಂಗಳೂರು : ಕಾರ್ಮಿಕಸಂಘಟನೆಗಳುವಿವಿಧಬೇಡಿಕೆಗಳಈಡೇರಿಕೆಗೆಆಗ್ರಹಿಸಿಭಾರತ್ಬಂದ್ಕರೆನೀಡಿರುವಹಿನ್ನೆಲೆಯಲ್ಲಿ ಇಂದು ಸಹ ಬಂದ್ ಮುಂದುವರೆಯಲಿದೆ.
ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್ ಆರ್ ಟಿಸಿ ನಿರ್ಧರಿಸಿದೆ. ಬಸ್ ಗಳು ಆಟೋ, ಓಲಾ, ಊಬರ್ ಎಲ್ಲಾ ಸೌಲಭ್ಯಗಳು ಲಭ್ಯವಿದೆ. ಆಂಬುಲೆನ್ಸ್, ಔಷಧಿ ಮಳಿಗೆಗಳು, ಪೆಟ್ರೋಲ್ ಬಂಕ್ ಗಳು ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲಿವೆ.
ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಇನ್ನು ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳು ಪರಿಸ್ಥಿತಿ ಆಧಾರದ ಮೇಲೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.