ಸಿಎಂಗೆ ಮತ ಹಾಕಿದ ಜನ ಉಗಿಯುತ್ತಿದ್ದಾರೆ ಎಂದ ಹಿರಿಯ ಕಾಂಗ್ರೆಸ್ ಮುಖಂಡ

ಬುಧವಾರ, 18 ಜುಲೈ 2018 (14:18 IST)
ಸಿಎಂ ಕುಮಾರಸ್ವಾಮಿಗೆ ಮತ ಹಾಕಿದ ಜನ ಉಗಿಯುತ್ತಿದ್ದಾರೆ ಎಂದ ಹಿರಿಯ ಕಾಂಗ್ರೆಸ್ ಮುಖಂಡ ಹೇಳಿಕೆ ಕೊಟ್ಟಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಈ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಇರುಸು ಮುರಿಸಿಗ ಕಾರಣವಾಗಿದೆ. ಅಷ್ಟೇ ಅಲ್ಲ, ಏಕವಚನದಲ್ಲಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವುದು ಈಗ ಚರ್ಚೆಗೆ ಕಾರಣವಾಗಿದೆ.

ಮಂಡ್ಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಚಂದ್ರಶೇಖರತ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಂದ್ರಶೇಖರ್, ಕೆ.ಆರ್.ಪೇಟೆ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಮತ ಹಾಕಿದ ಜನ ಉಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ಏಕವಚನದಲ್ಲಿ ಕುಮಾರಸ್ವಾಮಿ ವಿರುದ್ದ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡ್ತಾರೆ ಅಂತ ಜನ ಮತ ಹಾಕಿದ್ರು. ಸಿಎಂಆದ ಮೇಲೆ ಕುಮಾರಸ್ವಾಮಿ ಏನು ಮಾಡಿದರೂ ಅನ್ನೋದು ಜನಕ್ಕೆ ಗೊತ್ತಾಗಿದೆ. ಬಹಳ ಜನ ಮಹಿಳೆಯರು ಕುಮಾರಸ್ವಾಮಿ ಸಾಲ ಮನ್ನಾ ಮಾಡ್ತಾರೆ ಅಂತ ಮತ ಹಾಕಿದ್ರು. ಇದೀಗ ಕುಮಾರಸ್ವಾಮಿ ವಿರುದ್ದ ತಿರುಗಿ ಬಿದ್ದು ಉಗಿಯುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನನ್ನ ಕ್ಷೇತ್ರದ ಕೆಲ ಬೂತ್ ನಲ್ಲಿ ಜೆಡಿಎಸ್ ಏಜೆಂಟ್ ಗಳೇ ಇರಲಿಲ್ಲ. ಪ್ರತಿ ಬೂತ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು 50ರಿಂದ ನೂರು ಜನ ಇರ್ತಿದ್ರು. ಆದ್ರೆ ಜೆಡಿಎಸ್ ನವ್ರು ಇಬ್ಬರಿಂದ ಮೂರು ಮಂದಿ ಮಾತ್ರ ಇರ್ತಿದ್ರು. ಸಾಲ ಮನ್ನಾ ಮಾಡ್ತಾರೆ ಅನ್ನೋ ಕಾರಣಕ್ಕಾಗಿ ಜನ ಕುಮಾರಸ್ವಾಮಿ ಗೆ ಮತ ಹಾಕಿದ್ರು ಎಂದರು.

ಕಣ್ಣೀರು ಹಾಕಿದ ಕುಮಾರಸ್ವಾಮಿ ಸಮರ್ಥಿಸಿಕೊಳ್ಳುವಂತೆ ಕೆಪಿಸಿಸಿ ಸೂಚನೆ ಕೊಟ್ಟರೂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಟೀಕಿಸುವುದನ್ನು ಕಾಂಗ್ರೆಸ್ ಮುಖಂಡರು ಮುಂದುವರಿಸಿದ್ದಾರೆ. ಚಂದ್ರಶೇಖರ್ ಹೇಳಿಕೆಯಿಂದ ಕಾಂಗ್ರೆಸ್ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ