ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ : ಶಿವಕುಮಾರ್
ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ ಎಂದು ಡಿ.ಕೆ ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಾವು ಉತ್ತರ ಕರ್ನಾಟಕದಲ್ಲಿ ಅಧಿವೇಶನ ಮಾಡಲೇಬೇಕೆಂಬ ಒತ್ತಾಯದಿಂದಾಗಿ ಅಧಿವೇಶನ ನಡೆಯುತ್ತಿದೆ.
ಬಿಜೆಪಿ ಸರ್ಕಾರ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ಮರೆತಿದ್ದಾರೆ. ಉತ್ತರ ಕರ್ನಾಟಕವನ್ನು ಸರ್ಕಾರ ಮರೆತಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸಮಸ್ಯೆಗಳನ್ನು ಆಲಿಸಲು ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.