ಬಾಲಬ್ರೂಯಿ ಆವರಣದ ಮರಗಳನ್ನು ಕಡಿಯಬಾರದು ಎಂದು ಹೈಕೋರ್ಟ್ ಸ್ಪಷ್ಟವಾಗಿ ಸೂಚಿಸಿದೆ. ಬಾಲಬ್ರೂಯಿ ಆವರಣದ ಮರಗಳ ಸರ್ವೆ ನಡೆಸಿ ವರದಿ ಸಲ್ಲಿಸಬೇಕು. ಕೋರ್ಟ್ ಅನುಮತಿಯಿಲ್ಲದೇ ಮರಗಳನ್ನು ಕಡಿಯಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶದಲ್ಲಿ ತಿಳಿಸಿ, ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್ 19ಕ್ಕೆ ಮುಂದೂಡಿದೆ.
ಕಾನ್ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸಲು ಇತಿಹಾಸ ತಜ್ಞರಿಂದ ವಿರೋಧ:
ಪಾರಂಪರಿಕ ಮೌಲ್ಯ ಹೊಂದಿರುವ ಬಾಲಬ್ರೂಯಿ ಕಟ್ಟಡದಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸುವ ಸರ್ಕಾರಕ್ಕೆ ಪ್ರಸ್ತಾವಕ್ಕೆ ಈ ಹಿಂದೆ ಪರಿಸರವಾದಿಗಳು ಮತ್ತು ನಗರದ ಇತಿಹಾಸ ತಜ್ಞರಿಂದ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಪರಂಪರೆ ಸಾರುವ ಇಂಥ ತಾಣಗಳನ್ನು ಕಾಪಾಡಬೇಕು. ಒಮ್ಮೆ ಇಂಥ ಕಟ್ಟಡಗಳ ಮೂಲ ಸ್ವರೂಪ ನಾಶಪಡಿಸಿದರೆ ಮತ್ತೆ ರೂಪಿಸುವುದು ಅಸಾಧ್ಯ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು.