ಭವಾನಿ ರೇವಣ್ಣ ಇರುವಾಗಲೇ ಸಂತ್ರಸ್ತೆಯ ಹೇಳಿಕೆ ದಾಖಲಿಸಿದ ಎಸ್‌ಐಟಿ ತಂಡ
ಈ ವೇಳೆ ಮನೆಯಲ್ಲಿ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಜೆಡಿಎಸ್ ಮುಖಂಡರು ಇದ್ದರು. ಅದಲ್ಲದೆ ಸಂಸದ ಪ್ರಜ್ವಲ್ ರೇವಣ್ಣ ಅವರ ಮನೆಯಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದ್ದು ಈ ಹಿನ್ನೆಲೆ ಅಲ್ಲಿಯೂ ಬಿಗಿ ಭದ್ರತೆಯಲ್ಲಿ ಎಸ್‌ಐಟಿ ತಂಡ ಸ್ಥಳ ಮಹಜರು ನಡೆಸಿದರು.
ಮಹಜರು ಪ್ರಕ್ರಿಯೆ ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಂಡರು.