ಬೆಂಗಳೂರು : ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ನಿವಾಸಕ್ಕೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಭೇಟಿ ನೀಡಿದ್ದಾರೆ.
ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಆ ಮೂಲಕ ಚಿದಂಬರಂ ಕುಟುಂಬದ ಜತೆ ಡಿಕೆ ಶಿವಕುಮಾರ್ ಅವರು ಇಂದಿಗೂ ಆತ್ಮೀಯರಾಗಿದ್ದಾರೆ ಎಂಬುದು ತಿಳಿದುಬಂದಿದೆ. ಹಾಗೇ ಕಾರ್ತಿ ಡಿಕೆಶಿಯನ್ನು ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆ ಎಂಬುದು ತಿಳಿದುಬಂದಿಲ್ಲ.