ಸ್ಪೀಕರ್ ಸ್ಥಾನ ಸಮರ್ಥವಾಗಿ ನಿಭಾಯಿಸುತ್ತಾರೆ
ವರಿಷ್ಠರು ಯು.ಟಿ.ಖಾದರ್ ಅವರನ್ನ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಸ್ಪೀಕರ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಯು.ಟಿ.ಖಾದರ್ ಸಮರ್ಥರು, ಅನುಭವವೂ ಇದೆ. ಸ್ಪೀಕರ್ ಆಗಿ ಅವರು ಇತಿಹಾಸ ನಿರ್ಮಾಣ ಮಾಡುತ್ತಾರೆ. ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ ಎಂದು ಹೇಳಿದ್ರು.