ವೀಡಿಯೋ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ಮಂಗಳವಾರ, 8 ಆಗಸ್ಟ್ 2023 (10:10 IST)
ಉಡುಪಿ : ನಗರದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದ ವೀಡಿಯೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ವಹಿಸಿದೆ.

ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇರಿಸಿ ಹಿಂದೂ ಯುವತಿಯ ವಿಡೀಯೋ ಚಿತ್ರಿಕರಿಸಿದ್ದರು.

ಈ ವಿಚಾರವಾಗಿ ಕಾಲೇಜಿನ ಆಡಳಿತ ಮಂಡಳಿ ಮಂಡಳಿ ವಿದ್ಯಾರ್ಥಿನಿಯರಿಗೆ ಎಚ್ಚರಿಕೆ ನೀಡಿ ಕ್ರಮ ಕೈಗೊಂಡಿತ್ತು. ಬಳಿಕ ಈ ವಿಚಾರ ಬೆಳಕಿಗೆ ಬಂದಿದ್ದು ಮಲ್ಪೆ ಪೊಲೀಸ್ ಠಾಣೆಯಲ್ಲಿ ಜು.26ರಂದು ಸುಮೋಟೋ ಕೇಸ್ ದಾಖಲಾಗಿತ್ತು.

ಆರಂಭದಲ್ಲಿ ಪ್ರಕರಣವನ್ನು ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ತನಿಖೆ ನಡೆಸುತ್ತಿದ್ದರು. ಬಳಿಕ ತನಿಖಾಧಿಕಾರಿಯ ಬದಲಾವಣೆ ಮಾಡುವಂತೆ ಒತ್ತಡಗಳು ಬಂದಿದ್ದವು. ಬಳಿಕ ಪ್ರಕರಣವನ್ನು ಅವರಿಂದ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ಹಸ್ತಾಂತರಿಸಲಾಗಿತ್ತು. ಈಗ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ