ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ- ಹೆಚ್​ಡಿ ಕುಮಾರಸ್ವಾಮಿ

ಭಾನುವಾರ, 20 ಮಾರ್ಚ್ 2022 (17:09 IST)
ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್‌ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ(State government) ಕನಿಷ್ಠ 25 ಲಕ್ಷ ರೂ. ಪರಿಹಾರ ನೀಡಬೇಕು. 5 ಲಕ್ಷ ರೂ. ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.​ಡಿ. ಕುಮಾರಸ್ವಾಮಿ(HD Kumaraswamy) ಸರಣಿ ಟ್ವೀಟ್​ ಮಾಡಿದ್ದಾರೆ.
 
ಈ ದುರಂತಕ್ಕೆ ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ದಿವ್ಯನಿರ್ಲಕ್ಷ್ಯವೇ ಕಾರಣ. ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳ ಜೀವಗಳು ಬಲಿಯಾಗಿವೆ. ಮುಖ್ಯಮಂತ್ರಿಗಳು ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೊಡ್ಡ ಮೊತ್ತದ ಪರಿಹಾರ ಘೋಷಣೆ ಮಾಡಬೇಕು. ಮೃತ ಕುಟುಂಬಗಳ ಜೀವನೋಪಾಯಕ್ಕೆ ನೆರವು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.​ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್‌ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ. ಪರಿಹಾರ ನೀಡಬೇಕು. 5 ಲಕ್ಷ ರೂ. ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲಎಂದು @CMofKarnataka ಅವರನ್ನು ಒತ್ತಾಯ ಮಾಡುತ್ತೇನೆ.ಗಾಯಾಳುಗಳನ್ನು ಬೆಂಗಳೂರು, ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಿಗೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ವರದಿಗಳು ಬೆಳಗ್ಗೆಯಿಂದಲೂ ಮಾಧ್ಯಮಗಳಲ್ಲಿ ಬರುತ್ತಿವೆ. ಸರಕಾರ ಕೂಡಲೇ ತುರ್ತು ಗಮನ ಹರಿಸಿ, ಓರ್ವ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಬೇಕು. ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು ಎಂದು ಹೆಚ್.​ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ