ಹಿಜಾಬ್ (Hijab) ಅಥವಾ ಕೇಸರಿ ಶಾಲು (Saffron Shawl) ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ.
ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು. ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್ಗೆ ಸೂಚಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತೇವೆ