ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

Sampriya

ಮಂಗಳವಾರ, 15 ಜುಲೈ 2025 (14:32 IST)
Photo Credit X
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ಹಲವು ವರ್ಷಗಳಿಂದ ನಡೆಯಿಸುತ್ತಿದ್ದ ಹೋರಾಟಕ್ಕೆ ಗೆಲುವು ಸಿಕ್ಕಿದೆ. ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಿಂದ  ತಾಲ್ಲೂಕಿನ 13 ಗ್ರಾಮಗಳಲ್ಲಿ 1,777 ಎಕರೆಯನ್ನು ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚನ್ನರಾಯಪಟ್ಟಣ ಸುತ್ತಮುತ್ತಲಿನ 13 ಗ್ರಾಮಗಳ ಭೂ ಸ್ವಾಧೀನಕ್ಕೆ ಕೆಐಎಡಿಬಿಗೆ ಭೂಮಿ ನೀಡಲು ರೈತರು, ಸಂಘಟನೆಗಳು ಒಪ್ಪುತ್ತಿಲ್ಲ. ರಾಜ್ಯ ಸರ್ಕಾರ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆಐಎಡಿಬಿಯಿಂದ 1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಬಲವಂತವಾಗಿ ಖರೀದಿಸುವುದಿಲ್ಲ .ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯವಾಗಿದೆ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇದು ರೈತರ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ರೈತರ ಜೊತೆಗೆ ಚರ್ಚಿಸಿದ ಬಳಿಕ ಸಿಎಂ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ಪ್ರಕಟಿಸಿದ್ದಕ್ಕೆ ಧನ್ಯವಾದಗಳು ಎಂದು ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ