ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ, ಕರಿಮೆಣಸು ಸದ್ದು ಮಾಡಲಿದೆ.
ರಾಜ್ಯದ ಕಾಫಿ, ಕರಿಮೆಣಸು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ವಿವಿಧ ಬೆಳೆಗಾರ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಸಂಸದ ಪ್ರತಾಪ್ ಸಿಂಹ ರನ್ನು ಭೇಟಿಯಾಗಿ ಚರ್ಚೆ ನಡೆಸಿತು.
ಈ ಮೊದಲೇ ಸಂಕಷ್ಟದಲ್ಲಿದ್ದ ಕಾಫಿ, ಕರಿಮೆಣಸು ಕೖಷಿ ಉದ್ಯಮ ಇದೀಗ ಕೋರೋನಾ ಹಿನ್ನಲೆಯ ಲಾಕ್ ಡೌನ್ ನಿಂದಾಗಿ ಮತ್ತಷ್ಟು ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ ತೀವ್ರ ಸಂಕಷ್ಟದಲ್ಲಿರುವ ಕಾಫಿ, ಕರಿಮೆಣಸು ಬೆಳೆಗಾರರ ಸಮಸ್ಯೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಬೆಳೆಗಾರ ಒಕ್ಕೂಟಗಳ ಪ್ರಮುಖರು, ಸಂಸದ ಪ್ರತಾಪ್ ಸಿಂಹ ರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಸಂಸದರು, ಆಗಸ್ಟ್ ನಲ್ಲಿ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುತ್ತದೆ ಎಂದರು.