ರಾಜ್ಯದ ನಿಲುವು ಸಂವಿಧಾನಬದ್ಧ : ಬಸವರಾಜ ಬೊಮ್ಮಾಯಿ

ಶುಕ್ರವಾರ, 2 ಡಿಸೆಂಬರ್ 2022 (08:16 IST)
ಬೆಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದದ ಪ್ರಕರಣ ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಅವರು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ನಿಲುವು ಸಂವಿಧಾನಬದ್ಧ ಎಂದು ಹೇಳಿದರು.

ಮಹಾರಾಷ್ಟ್ರದ ಅರ್ಜಿ ಮೈಂಟೆನೆಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ