ಜೂನ್ ಅಂತ್ಯಕ್ಕೆ ರಾಜ್ಯದ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ

ಬುಧವಾರ, 15 ಫೆಬ್ರವರಿ 2023 (08:10 IST)
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಜೂನ್ ಒಳಗೆ ಮುಕ್ತಾಯ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.

ವಿಧಾನಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಅಬ್ದುಲ್ ಜಬ್ಬಾರ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳು ಪ್ರಾರಂಭವಾಗಿ 7 ವರ್ಷ ಕಳೆದರೂ ಇನ್ನೂ ಮುಗಿದಿಲ್ಲ. ಯೋಜನೆ ಯಾವಾಗ ಮುಗಿಯಲಿದೆ? ಯಾಕೆ ತಡವಾಯ್ತು ಎಂದು ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಭೈರತಿ ಬಸವರಾಜ್, ರಾಜ್ಯದಲ್ಲಿ 7 ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಜೂನ್ 2023 ಒಳಗೆ ಎಲ್ಲಾ ಕಾಮಗಾರಿ ಮುಗಿಸಲು ಕೇಂದ್ರ ಸೂಚನೆ ನೀಡಿದೆ. ಅದರಂತೆ ಜೂನ್ ವೇಳೆಗೆ ಕಾಮಗಾರಿ ಮುಗಿಯಲಿದೆ ಎಂದರು. 

ಒಟ್ಟು 651 ಕಾಮಗಾರಿ ನಡೆಯುತ್ತಿದೆ. ಈವರೆಗೆ 522 ಕಾಮಗಾರಿ ಪೂರ್ಣಗೊಂಡಿದೆ. 127 ಕಾಮಗಾರಿ ನಡೆಯುತ್ತಿದೆ. ಕರ್ನಾಟಕದಲ್ಲಿ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ದೇಶದಲ್ಲಿ 3 ಸ್ಥಾನದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಾವು ಇದ್ದೇವೆ ಎಂದು ತಿಳಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ