ಬಜೆಟ್ ನಲ್ಲಿ ನಮಗೆ ಅನ್ಯಾಯ ಆಗಿದೆ ಅಂತ ಸರ್ಕಾರದ ವಿರುದ್ಧ ನೇಕಾರರು ಗರಂ ಆಗಿದ್ದಾರೆ.ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ತರಕಿ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಜನರಿಂದ ಧರಣಿ ನಡೆಸಲಾಗಿದೆ.ಬೆಂಗಳೂರಿನ ಸಹಿತ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಹ ಪ್ರತಿಭಟನೆ ನಡೆಸಲಾಗ್ತಿದೆ.10 HP ವಿದ್ಯುತ್ ಸಂಪರ್ಕ ಹೊಂದಿರುವ ನೇಕಾರರಿಗೆ ಕೇವಲ 250 ಯೂನಿಟ್ ಘೋಷಣೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾರೆ.12/06/2023ರಂದು ಸಚಿವರ ಮೂಲಕ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ.ಬಜೆಟ್ ನಲ್ಲಿ ನೇಕಾರ ಸಮುದಾಯವನ್ನು ಕಡೆಗಣಿಸಲಾಗಿದೆ ಅಂತ ನೇಕಾರರು ಆಕ್ರೋಶ ಹೊರಹಾಕಿದ್ದಾರೆ.