ಚುನಾವಣೆಯಲ್ಲಿ ಸೋಲಿಸಲು ಸ್ವಪಕ್ಷದ ನಾಯಕರು ಮಾಡಿದ ತಂತ್ರಗಾರಿಕೆ

ಶನಿವಾರ, 20 ಆಗಸ್ಟ್ 2022 (17:50 IST)
2018ರಲ್ಲಿ ನಡೆದ ಚುನಾವಣೆಯಲ್ಲಿ ಸೋಲಿಸಲು ಸ್ವಪಕ್ಷದ ನಾಯಕರು ಮಾಡಿದ ತಂತ್ರಗಾರಿಕೆ ಬಗೆಗಿನ ಗುಟ್ಟನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಬಹಿರಂಗ ಪಡಿಸಿದ್ದಾರೆ. ನನ್ನನ್ನು ಸೋಲಿಸಲು ಕ್ಷೇತ್ರದಲ್ಲಿ ಸ್ವಪಕ್ಷದವರೇ ಹಣ ಹಂಚಿಕೆ ಮಾಡಿದ್ರು. ನಾವು ಅವರನ್ನ ಸೋಲಿಸಲು ಪ್ರಯತ್ನ ಮಾಡಿದ್ವಿ ಎಂದು ಸಹ ಹೇಳಿಕೊಂಡಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ‌ ಆದ ತಪ್ಪು ಈಗ ಆಗಲ್ಲ. ನನ್ನನ್ನು ಕಟ್ಟಿಹಾಕಲು ಕ್ಷೇತ್ರದಲ್ಲಿ ಈಗಾಗಲೇ ಪೂರಕವಾಗಿ ಬಿಜೆಪಿಯ ನಾಯಕರು ಕೆಲಸ ಮಾಡುತ್ತಿದ್ದಾರೆ. ಯಮಕನಮರಡಿ ಕ್ಷೇತ್ರಕ್ಕೆ ನನ್ನನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ. ಕ್ಷೇತ್ರದ ಮೇಲೆ ಹಿಡಿತವಿದೆ. ಜನರು ಯಾರ ಪರವಾಗಿ ಇದ್ದಾರೆ ಅಂತ ಗೊತ್ತಿದೆ. ರಾಜ್ಯದ 224 ಕ್ಷೇತ್ರದಲ್ಲಿ ವಿರೋಧ ಅಲೆ ಇರೋದು ಸಹಜ ಎಂದರು. ಯಮಕನಮರಡಿ ಕ್ಷೇತ್ರದಲ್ಲಿ ಆಪ್ತ ಸಹಾಯಕರ ಹಾವಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಮುಖ ಕಾರ್ಯಕರ್ತರು, ಆಪ್ತ ಸಹಾಯಕರು ಇಲ್ಲದೇ ಕೆಲಸ ಮಾಡಲು ಸಾಧ್ಯವಿಲ್ಲ. ತಪ್ಪನ್ನು ಸರಿ ಮಾಡಲು ನಿರಂತರ ಪ್ರಯತ್ನ ನಡೆಯಲಿದೆ. ಆಪ್ತ ಸಹಾಯಕರು ಇಲ್ಲದೇ ಶಾಸಕರು ಕೆಲಸ ಮಾಡಲು ಕಷ್ಟವಾಗುತ್ತದೆ.‌ ಕ್ಷೇತ್ರದಲ್ಲಿ ಪ್ರಚಾರ ನಡೆಸದೇ, ಹಣ ಖರ್ಚು ಮಾಡದೇ ಗೆದ್ದಿದ್ದೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ