ಹುಟ್ಟುಹಬ್ಬದ ಮರುದಿನವೇ ವಿದ್ಯಾರ್ಥಿ ಶವವಾಗಿ ಪತ್ತೆ..!
ಕಾನ್ಪುರದ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಹುಟ್ಟುಹಬ್ಬದ ಮರುದಿನವೇ ಶವವಾಗಿ ಪತ್ತೆಯಾಗಿದ್ದಾನೆ. ಕಾಲೇಜಿನ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, 24 ವರ್ಷದ ಯುವಕನಿಗೆ ಭಾರವಾದ ವಸ್ತುವಿನಿಂದ ತಿವಿದಿರುವ ಅನೇಕ ಗಾಯಗಳಾಗಿದ್ದು, ವಿದ್ಯಾರ್ಥಿಯ ದೇಹದ ಬಳಿ ಒಡೆದ ಮದ್ಯದ ಬಾಟಲಿ ಹಾಗೂ ಸಿಗರೇಟ್ ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.