ಸಚಿವ ಸಾರಾ ಮಹೇಶ್ ಕಾರನ್ನು ತಡೆದ ಮುಖ್ಯ ಪೇದೆ ಅಮಾನತು

ಬುಧವಾರ, 27 ಮಾರ್ಚ್ 2019 (14:11 IST)
ಮೈಸೂರು : ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾರಾ ಮಹೇಶ್ ಅವರ ಕಾರನ್ನು ತಡೆದಿದ್ದ ಮುಖ್ಯ ಪೇದೆಯನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.


ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ವಿಜಯ್‍ಶಂಕರ್ ನಾಮಪತ್ರ ಸಲ್ಲಿಕೆ ವೇಳೆ ಮೂರು ಕಾರುಗಳಿಗೆ ಅವಕಾಶವಿದ್ದರೂ, ಸಚಿವರ ಕಾರಿಗೆ ಮುಖ್ಯಪೇದೆ ವೆಂಕಟೇಶ್ ತಡೆ ಹಾಕಿದ್ದರು. ಈ ಹಿನ್ನಲೆಯಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಮುಖ್ಯ ಪೇದೆಯನ್ನು ಅಮಾನತುಗೊಳಿಸಲಾಗಿದೆ.


ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಾರಾ ಮಹೇಶ್ ಅವರು,’ ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಧಿಕಾರಿ ಕಚೇರಿ ಸುತ್ತ 100 ಮೀಟರ್ ನಿಷೇಧಾಜ್ಞೆ ಇತ್ತು. ಆದರೆ ಅವರು ನನ್ನ ಕಾರನ್ನು ಅರ್ಧ ಕಿಲೋ ಮೀಟರ್ ಹಿಂದೆ ತಡೆದಿದ್ದರು. ಮುಖ್ಯ ಪೇದೆಗೆ ಕಾನೂನಿನ ಅರಿವಿರಲಿಲ್ಲ. ಈ ಬಗ್ಗೆ ನನ್ನ ಜೊತೆಯಿದ್ದವರು ತಿಳಿಸಿದರೂ ಅದನ್ನು ಒಪ್ಪಲು ಸಿದ್ಧರಿರಲಿಲ್ಲ. ಇದಾದ ನಂತರ ಹಿರಿಯ ಅಧಿಕಾರಿಗಳು ಬಂದು ಅವರಿಗೆ ತಿಳಿ ಹೇಳಿ ಕಾರನ್ನು ಬಿಟ್ಟರು. ಈ ಬಗ್ಗೆ ಪರಿಶೀಲನೆ ನಡೆಸಿ ಕರ್ತವ್ಯ ಲೋಪವೆಸಗಿದ ಮುಖ್ಯಪೇದೆಯನ್ನು ಅಮಾನತುಗೊಳಿಸಿರಬಹುದು. ಈ ಬಗ್ಗೆ ನಾನು ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ