ಮಕ್ಕಳೇ ಇದರ ಟಾರ್ಗೆಟ್! ಕಣ್ಣು ಕೆಂಪಾಗಿಸುತ್ತಿದೆ `ಮದ್ರಾಸ್ ಐ’

ಮಂಗಳವಾರ, 25 ಜುಲೈ 2023 (13:02 IST)
ಬೆಂಗಳೂರು : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ `ಮದ್ರಾಸ್ ಐ’ ಈ ಬಾರಿ ಅವಧಿಗೂ ಮುನ್ನ ಮಳೆಗಾಲದಲ್ಲೇ ಎಂಟ್ರಿ ಕೊಟ್ಟು ರಾಜ್ಯದ ಜನರ ಕಣ್ಣು ಕೆಂಪಗಾಗಿಸುತ್ತಿದೆ.

ಮದ್ರಾಸ್ ಐ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಮಕ್ಕಳೇ ಈ ವೈರಾಣುವಿನ ಟಾರ್ಗೆಟ್ ಎಂದು ಹೇಳಲಾಗಿದೆ. ಪ್ರತಿದಿನ 60 ರಿಂದ 80 ಕೇಸ್ಗಳು ರಾಜ್ಯದಲ್ಲಿ ದಾಖಲಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ. 

ಕಂಜಕ್ಟಿವೈಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟು ಮಾಡುತ್ತವೆ.

ಜುಲೈ ಆರಂಭದಿಂದಲೂ ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ಸೂರ್ಯನ ಕಿರಣಗಳ ದರ್ಶನ ಕಡಿಮೆಯಾಗಿದೆ. ಇದರ ಪರಿಣಾಮ ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿ, ಅವಧಿಗೂ ಮೊದಲೇ ಮದ್ರಾಸ್ ಐ ವೈರಾಣು ಎಂಟ್ರಿ ಕೊಟ್ಟಿದೆ. ತಮಿಳುನಾಡಿನಲ್ಲೂ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಇದೀಗ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ