ಬೆಂಗಳೂರು : ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.