ಪ್ರತಿಮಾ ಕೊಲೆ ಸಂಬಂಧ ತನಿಖೆಯಾದ ನಂತರ ಸತ್ಯಾಂಶ ಗೊತ್ತಾಗಲಿದೆ
ಪ್ರತಿಮಾ ಕೊಲೆ ಸಂಬಂಧ ಜಿಲ್ಲಾಧಿಕಾರಿ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಪ್ರತಿಮಾ ನಿರಂತರವಾಗಿ ನನ್ನ ಸಂಪರ್ಕದಲ್ಲಿದ್ರು.ಪ್ರತಿಮಾ ಒಂದೊಳ್ಳೆ ಅಧಿಕಾರಿ.ಎಲ್ಲಾ ಸಭೆಗಳಲ್ಲೂ ಕಡತಗಳ ಜೊತೆಗೆ ಹಾಜರಾಗ್ತಿದ್ರು.
ಕಳೆದ ಒಂದು ತಿಂಗಳ ಹಿಂದೆ ಎಲ್ಲಾ ಅಧಿಕಾರಿಗಳನ್ನು ಕರೆದು ಸ್ವಲ್ಪ ಜೋರು ಮಾಡಿದ್ದೆ.ಅಕ್ರಮವಾಗಿ ಜಲ್ಲಿಕಲ್ಲು, ಕಲ್ಲು ಗಣಿಗಾರಿಕೆ ನಡೀತಿದೆ, ತಮಿಳುನಾಡಿನಿಂದ ತರ್ತಿದ್ದಾರೆ ನೋಡಿ ಅಂದಿದ್ದೆ.ಕೆಲಸದ ಸಂಬಂಧ ಯಾವುದೇ ಸಮಸ್ಯೆ ಇರಲಿಲ್ಲ.ಆ ರೀತಿಯ ಯಾವುದೇ ದೂರು ಬಂದಿಲ್ಲ.
ತಮಿಳುನಾಡಿನ ಕಡೆಗೆ ಬರುವ ಲಾರಿಗಳನ್ನು ತಡೆಯೋಕೆ ಹೇಳಿದ್ದೆ.ಪಾಸಿಟಿವ್ ಮೈಂಡ್ ಸಟ್ ಅಧಿಕಾರಿ ಹೊಂದಿದ್ದದರು.ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಜಿಲ್ಲಾಧಿಕಾರಿ ಕೆಎ ದಯಾನಂದ್ ಹೇಳಿದ್ದಾರೆ.