ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಬದ್ಧ ಎಂದ ಸಚಿವ

ಸೋಮವಾರ, 1 ಅಕ್ಟೋಬರ್ 2018 (17:16 IST)
ದೇಶದ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ರಾಯಚೂರ ಹಾಗೂ ಯಾದಗಿರಿ ಜಿಲ್ಲೆಗಳು ಸೇರಿದ್ದು, ಈ ಎರಡು ಜಿಲ್ಲೆಗಳಿಗೆ ಕೇಂದ್ರ ಸರಕಾರ  ಅಭಿವೃದ್ಧಿಗಾಗಿ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಮಹತ್ವಾಕಾಂಕ್ಷೆ  ಜಿಲ್ಲೆಗಳಾಗಿವೆ. 2020 ರ ವೇಳೆಗೆ ಶಿಕ್ಷಣ, ಆರೋಗ್ಯ ಹಾಗೂ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಆಯುಷ್ಮಾನ್ ಯೋಜನೆ ಜನರಿಗೆ ತಲುಪಿಸುವ ಗುರಿ ಹೊಂದಲಾಗಿದೆ ಎಂದರು. ಬೌದ್ಧ  ಧರ್ಮಗುರು ದಲಾಯಿ ಲಾಮ ಅವರ ಹತ್ಯೆಗೆ ಉಗ್ರರ ಸಂಚು ರೂಪಿಸಿದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ