ಸಿಟಿ ರವಿ ವಿರುದ್ಧ ಮುಗಿಬಿದ್ದ ವೀರಶೈವ ಲಿಂಗಾಯತ ಸಮುದಾಯ
ಮಾಜಿ ಸಚಿವ, ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು ತಿರುಗಿ ಬಿದ್ದಿದ್ದಾರೆ. ಸಿ.ಟಿ. ರವಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿರುವ ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಮಾಜಿ ಸಚಿವರಿಗೆ ಏಕವಚನದಲ್ಲೇ ವಾರ್ನಿಂಗ್ ನೀಡಿದೆ. ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ಕಿತ್ತೋದ ಸಿ.ಟಿ. ರವಿ ಎಂದು ಘೋಷಣೆ ಕೂಗಬೇಕು ಎಂದು ಕರೆಕೊಟ್ಟಿದೆ..ಅಷ್ಟಕ್ಕೂ ಸಿ.ಟಿ. ರವಿ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದ್ದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಸಿಟಿ ರವಿ ಪರೋಕ್ಷವಾಗಿ ತಿರುಗೇಟು ನೀಡುತ್ತಿರೋದು...ಇನ್ನೂ ವೀರಶೈವ ಲಿಂಗಾಯತ ಸಮುದಾಯದವರು ತಿರುಗಿ ಬೀಳುತ್ತೀದ್ದಂತೆ ಉಲ್ಟಾ ಹೊಡೆದ ಸಿಟಿ ರವಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗಿದೆ ನನ್ನ ಹೇಳಿಕೆ ತಿರುಚಲಾಗಿದೆ ಎಂದು ಟ್ವೀಟ್ ಮೂಲಕ ಸಮರ್ಥನೆ ಮಾಡಿಕೊಂಡಿದ್ದಾರೆ