ಜ.6ರಂದು ನಿಗದಿತ ಬಿಂದು ಸೇರಲಿದೆ ನೌಕೆ’,
ಸೂರ್ಯನ ಅಧ್ಯಯನಕ್ಕಾಗಿ ಭಾರತ ನಿರ್ಮಿಸಿರುವ ಪ್ರಥಮ ಅಂತರಿಕ್ಷ ವೀಕ್ಷಣಾಲಯ ಆದಿತ್ಯ ಎಲ್ 1 ಯೋಜನೆಯ ನೌಕೆಯು ನಿಗದಿತ ಲಗ್ರಾಂಜಿಯನ್ ಬಿಂದು ಎಲ್ 1 ಅನ್ನು ಜ. 6ರಂದು ತಲುಪಲಿದೆ' ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ. ವಿಜ್ಞಾನ ಭಾರತಿ ಎಂಬ ಸ್ವಯಂ ಸೇವಾ ಸಂಸ್ಥೆ ಆಯೋಜಿಸಿದ ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ಅವರು ಈ ಮಾಹಿತಿ ನೀಡಿದರು.
ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿರುವ ಎಲ್ 1ಗೆ ತಲುಪಲು ಸೆಪ್ಟೆಂಬರ್ 2ರಂದು ಶ್ರೀಹರಿಕೋಟದ ಇಸ್ರೋ ಉಡಾವಣಾ ಕೇಂದ್ರದಿಂದ 'ಅದಿತ್ಯ ಎಲ್ 1' ನೌಕೆ ಹೊತ್ತ ಪಿಎಸ್‌ಎಲ್‌ವಿ ಸಿ 57 ರಾಕೆಟ್ ನಭಕ್ಕೆ ಚಿಮ್ಮಿತ್ತು. ಒಂದು ಬಾರಿ ಎಲ್ 1 ಬಿಂದುವನ್ನು ನೌಕೆ ತಲುಪಿದ ನಂತರ, ಎಂಜಿನ್ ಅನ್ನು ಮರು ಆರಂಭಿಸಲಾಗುವುದು. ಇದರಿಂದ ನೌಕೆಯು ಮತ್ತೆ ಮುಂದೆ ಹೋಗದಂತೆ ಇದು ಕೆಲಸ ಮಾಡಲಿದೆ. ಜತೆಗೆ ಅಲ್ಲಿಯೇ ಸುತ್ತುತ್ತಾ ಎಲ್ 1ನಲ್ಲಿಯೇ ಸಿಲುಕಿಕೊಳ್ಳಲಿದೆ ಎಂದು ವಿವರಿಸಿದರು.