ಪುಂಡಾನೆಗಳ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

ಶನಿವಾರ, 23 ಏಪ್ರಿಲ್ 2022 (20:39 IST)
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅನುಘಟ್ಟ ಗ್ರಾಮದಲ್ಲಿ ಕಾಡಾನೆ ದಾಂಧಲೆ ಮಾಡಿದೆ. ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಲಗ್ಗೆಯಿಟ್ಟ ಒಂಟಿ ಸಲಗ, ಕಟ್ಟಡದ ಬಾಗಿಲು ಮುರಿದು ಅಕ್ಕಿಚೀಲ ಹೊರಗೆಳೆದು ತಿಂದಿದೆ. ಕಾಡಾನೆ ದಾಂಧಲೆ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಳೆದ ಕೆಲ ದಿನಗಳಿಂದ ಬಯಲು ಸೀಮೆ ಭಾಗದಲ್ಲಿ  ಕಾಡಾನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳು ಗ್ರಾಮ ಮನೆಗಳ ಸಮೀಪವೇ ಓಡಾಡಿ ಆತಂಕ ಸೃಷ್ಟಿ ಮಾಡುತ್ತಿವೆ. ಕೂಡಲೆ ಪುಂಡಾನೆಗಳ ಸ್ಥಳಾಂತರಕ್ಕೆ ಗ್ರಾಮಸ್ಥರು ಆಗ್ರಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ