ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಶನಿವಾರ, 25 ಮಾರ್ಚ್ 2023 (19:20 IST)
ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಳೆ ಆಗು ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಮಾರ್ಚ್ 26 ಮತ್ತು 27ರಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ . ಮಾರ್ಚ್ 28ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಕಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಒಟ್ನಲ್ಲಿ ಹವಾಮಾನದಲ್ಲಿ ಉಂಟಾಗುತ್ತಿರುವ ತೀವ್ರ ಬದಲಾವಣೆಯಿಂದ ಈ ವರ್ಷದ ಆರಂಭದ ಪೂರ್ವ ಮುಂಗಾರು ಚಟುವಟಿಕೆಗಳು ಬೇಗ ಪ್ರಾರಂಭವಾಗುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ