ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಗಂಡನನ್ನೇ ಕೊಲೆ ಮಾಡಿಸಿದ ಪತ್ನಿ!

ಮಂಗಳವಾರ, 6 ಡಿಸೆಂಬರ್ 2022 (09:26 IST)
ಕೋಲಾರ : ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು ಪ್ರಿಯಕರನಿಂದಲೇ ಪತಿಯನ್ನ ಕೊಲೆ ಮಾಡಿಸಿರುವ ಘಟನೆ ನಡೆದಿದ್ದು,

ಪತ್ನಿ ಹಾಗೂ ಪ್ರಿಯಕರನನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಚಂಬೆ ಗ್ರಾಮದ ಆನಂದ್ ಕೊಲೆಯಾದ ವ್ಯಕ್ತಿ. ಆನಂದ್ ಕಳೆದ ನವೆಂಬರ್ 21 ರಂದು ಕಾಣೆಯಾಗಿದ್ದರು. ಈ ಸಂಬಂಧ ಕೋಲಾರದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು.

ನಂತರ ಆನಂದ್ನನ್ನು ಕೊಲೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಬಿ.ಮಾಕನಹಳ್ಳಿ ವ್ಯಾಪ್ತಿಯಲ್ಲಿ ಬಿಸಾಡಿರುವುದು ಗೊತ್ತಾಗಿದೆ. ಈ ಸಂಬಂಧ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದ ನಂದಗುಡಿ ಪೊಲೀಸರು ಕೊಲೆ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಸಂಬಂಧ: ಪತ್ನಿ ಚೈತ್ರಾ ಹಾಗೂ ಚಲಪತಿ ನಡುವೆ ಅಕ್ರಮ ಸಂಬಂಧವಿತ್ತು. ಈ ವಿಚಾರ ಆನಂದನಿಗೆ ಗೊತ್ತಾಗಿದ್ದರಿಂದ ಪ್ರಿಯಕರನೊಂದಿಗೆ ಸೇರಿ ಪತಿಯನ್ನ ಮುಗಿಸಿದ್ದಾಳೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. 

ಘಟನೆ ಸಂಬಂಧ ಮಾಸ್ತಿ ಹಾಗೂ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂದಗುಡಿ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ