25 ವರ್ಷದ ಮಹಿಳೆಯೊಬ್ಬರು ಆಕಸ್ಮಿಕವಾಗಿ ತನ್ನ ಅಜ್ಜಿಯನ್ನು ಗೋಡೆಗೆ ತಳ್ಳಿದ್ದು, ಅಜ್ಜಿ ಸಾವನ್ನಪ್ಪಿದ್ದಾರೆ. ಅಜ್ಜಿ ಸಾವಿನಿಂದ ಆಘಾತಕ್ಕೊಳಗಾದ ಮಹಿಳೆ ಬಳಿಕ ತಾನೂ ನೇಣು ಬಿಗಿದುಕೊಂಡು25 ವರ್ಷದ ಮಹಿಳೆಯೊಬ್ಬರು ಆಕಸ್ಮಿಕವಾಗಿ ತನ್ನ ಅಜ್ಜಿಯನ್ನು ಗೋಡೆಗೆ ತಳ್ಳಿದ್ದು, ಅಜ್ಜಿ ಸಾವನ್ನಪ್ಪಿದ್ದಾರೆ. ಅಜ್ಜಿ ಸಾವಿನಿಂದ ಆಘಾತಕ್ಕೊಳಗಾದ ಮಹಿಳೆ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಅವರ ಮನೆಯಲ್ಲಿ ನಡೆದಿದೆ.
ಮಾರುತಿ ಲೇಔಟ್ ನಿವಾಸಿಗಳಾದ ಬಿಕಾಂ ಪದವೀಧರರಾದ ಮಮತಾ (25) ಅವರ ಅಜ್ಜಿ ಜಯಮ್ಮ (70) ಸಂಜೆ 4.30ರ ಸುಮಾರಿಗೆ ಇಬ್ಬರೂ ಜಗಳ ಮಾಡಿದ್ದಾರೆ. ಈ ವೇಳೆ ಮಮತಾ ತಮ್ಮ ಅಜ್ಜಿಯನ್ನು ಗೋಡೆಗೆ ತಳ್ಳಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜಯಮ್ಮ ರಕ್ತಸ್ರಾವವಾಗಿ ಕುಸಿದು ಬಿದ್ದಿದ್ದಾರೆ. ಆಕೆ ಸತ್ತಿರುವುದನ್ನು ಕಂಡು ಆಘಾತಕ್ಕೊಳಗಾದ ಮಮತಾ ಬೆಡ್ ರೂಮಿಗೆ ಬೀಗ ಹಾಕಿಕೊಂಡು ನೇಣಿಗೆ ಶರಣಾಗಿದ್ದಾರೆ. ಮಮತಾ ಅವರ ಸಹೋದರ ಚೇತನ್ ಅವರು ಕೆಲಸದಿಂದ ಹಿಂದಿರುಗಿದ ನಂತರ ಮೃತದೇಹಗಳು ಪತ್ತೆಯಾಗಿವೆ. ಅವರು ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಬಳಿಕ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.