ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ - ಮೋದಿ
ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಬಾರಿಯ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ. ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ಖಾತ್ರಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಂಸತ್ತಿನಲ್ಲಿ ಮೊದಲ ಬಾರಿಗೆ ಹೊಸ ಸಂಸದರು ಮಾತನಾಡುವಾಗ ಇಡೀ ಸಂಸತ್ತು ಅವರಿಗೆ ಗೌರವವನ್ನು ನೀಡಿ ವಿಶ್ವಾಸವನ್ನು ನೀಡುವ ವಾತಾವರಣವನ್ನು ಸೃಷ್ಟಿಸುವುದು ಸಂಸತ್ತಿನಲ್ಲಿ ಸಂಪ್ರದಾಯವಾಗಿದೆ ಎಂದು ತಿಳಿಸಿದರು.