ಕುಡಿತಕ್ಕೆ ಹಣ ಕೊಡಲಿಲ್ಲಾಂತ ಹೆಣವಾದ ಯುವಕ
ಕುಡಿತದ ದಾಸನಾಗಿದ್ದ ಯುವಕನಿಗೆ ಕುಡಿತಕ್ಕೆ ಹಣ ಕೊಡಲಿಲ್ಲ ಎಂದು ಮನನೊಂದು ಹೆಣವಾದ ಘಟನೆ ನಡೆದಿದೆ.
ಮದ್ಯಪಾನಕ್ಕೆ ಹಣ ಕೊಡಲು ಪೋಷಕರು ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶರಣಬಸಪ್ಪ ಎಂಬ ಯುವಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.
ಯುವಕ ಶರಣಬಸಪ್ಪ ತನ್ನ ತಂದೆಯ ಬೈಕ್ ನಲ್ಲಿದ್ದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಆತನನ್ನು ಆಸ್ಪತ್ರೆಗೆ ದಾಖಲು ಮಾಡಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.