ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ! ಹುಡುಕಿಕೊಟ್ಟವರಿಗೆ ನಗದು ಬಹುಮಾನ
ನಾಪತ್ತೆಯಾದ ಯುವಕನ ಪೋಷಕರು ಮಗನಿಗಾಗಿ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಆ ದಾರಿಯಾಗಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸರ್ಕಾರಿ ಬಸ್ಗಳಲ್ಲೂ ಹುಡುಕಾಟ ನಡೆಸಿದ್ದಾರೆ. ಆದರೆ ಯುವಕ ಮಾತ್ರ ಪತ್ತೆಯಾಗಿಲ್ಲ.
ನಾಪತ್ತೆಯಾಗಿರುವ ಯುವಕನನ್ನು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ತಿಮ್ಲಾಪುರ ಗ್ರಾಮದ ಲವ (22) ಎಂದು ಗುರುತಿಸಲಾಗಿದೆ. ಯುವಕ ಲವ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದಾನೆ. ಆದರೂ ಆತನಿಗೆ ಒಂದಷ್ಟು ಜ್ಞಾನವಿದೆ, ಒಳ್ಳೆಯದು-ಕೆಟ್ಟದರ ಬಗ್ಗೆ ಅರಿವಿದೆ ಎಂದು ಪೋಷಕರು ತಿಳಿಸಿದ್ದಾರೆ.