ಉಡುಪಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬೆನ್ನಲ್ಲೇ ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್‌ಗೂ ಅಶ್ಲೀಲ ವಿಡಿಯೋ ಭೀತಿ ಶುರುವಾಗಿ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದಿದ್ದರು.
ಮಾನಹಾನಿ ಸುದ್ದಿ ಪ್ರಕಟಿಸದಂತೆ ಈಶ್ವರಪ್ಪ ಪುತ್ರ ಕಾಂತೇಶ್ ವಿರುದ್ಧ ಅಶ್ಲೀಲ ಫೋಟೋ, ವಿಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ಆದೇಶ ತಂದಿದ್ದರು.
ಈ ಸಂಬಂಧ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಮ್ಮನ್ನು ಹೇಗಾದರೂ ಮಾಡಿ ಹಿಂದೆ ಸರಿಸಬೇಕೆಂಬ ಪಯತ್ನ ನಡೆಯುತ್ತಿದೆ. ನಮಗೆ ಅಪಮಾನ ಮಾಡಬೇಕು ಎಂಬ ಕುತಂತ್ರ ನಡೆಯುತ್ತಿದೆ. ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಇದೇ ಕಾರಣಕ್ಕೆ ತಡೆಯಾಜ್ಞೆ ತಂದಿದ್ದೇವೆ ಎಂದರು.
ಈ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇವೆ ಬಿಟ್ಟರೇ ಬೇರೇನೂ ಇಲ್ಲ ಎಂದರು.
ಇನ್ನೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು ಅದೊಂದು ದರಿದ್ರ ಸಬ್ಜೆಕ್ಟ್ ನಾವ್ಯಾಕೆ ಮಾತನಾಡೋಣ. ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತೆ. ದೇಶಾದ್ಯಂತ ಜನ ಛೀ.. ಥೂ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.