ನಾಳೆ ಚುನಾವಣಾ ಆಯೋಗದ‌ ಸಭೆ ಇದೆ- ಡಿಸಿಎಂ ಡಿಕೆಶಿವಕುಮಾರ್

geetha

ಗುರುವಾರ, 7 ಮಾರ್ಚ್ 2024 (16:24 IST)
ಬೆಂಗಳೂರು-ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ‌ ಘೋಷಣೆ ವಿಚಾರದ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆಶಿ, ನಾಳೆ ಚುನಾವಣಾ ಆಯೋಗದ‌ಸಭೆ ಇದೆ. ಸಭೆಯ ನಂತರ ಕಾಂಗ್ರೆಸ್ ಟಿಕೆಟ್ ವಿಚಾರದ‌ಬಗ್ಗೆ ಎಐಸಿಸಿ‌ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದರು.ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ ಡಿಸಿಎಂ, ಕೇವಲ ಇಬ್ಬರು‌ ಮೂವರಲ್ಲ ಬಿಜೆಪಿಯಿಂದ ಅನೇಕ‌ ಜನ ಕಾಂಗ್ರೆಸ್ ಗೆ ಆಗಮಿಸಲಿದ್ದಾರೆ ಎಂದರು.
 
ಮಹದಾಯಿ ಕಾಮಗಾರಿಗೆ ವಿಳಂಬ ವಿಚಾರದ ಬಗ್ಗೆ ಮಾತನಾಡಿದ ಡಿಕೆಶಿ, ಈ ವಿಚಾರದಲ್ಲಿ‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ‌ ಉತ್ತರ ನೀಡಬೇಕು. ಇದೇ ವಿಚಾರದಲ್ಲಿ ಹುಬ್ಬಳ್ಳಿಯಲ್ಲಿ‌ ವಿಜಯೋತ್ಸವ ಮಾಡಿದ್ರು. ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ ?. ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದರೆ ಅವರಿಗೂ ಒಂದು ಗೌರವ. ಪ್ರಹ್ಲಾದ್ ಜೋಶಿ ಯಾಕೆ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಉತ್ತರಿಸಲಿ ಎಂದು ಡಿಕೆಶಿ ಹೇಳಿದ್ದಾರೆ.
 
ಶೀಘ್ರವೇ ಫ್ಲಡ್ ಗೇಟ್ ಓಪನ್ ಆಗುತ್ತೆ ಎಂಬ ಮಾಜಿ‌ ಸಿಎಂ‌ ಜಗದೀಶ ಶೆಟ್ಟರ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ ಡಿಸಿಎಂ, ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ ಕಾದು‌ನೋಡಿ. ಶೆಟ್ಟರ್ ಹೇಳಿಕೆಗೆ ಡಿಸಿಎಂ ಡಿಕೆಶಿ ತಿರುಗೇಟು ನೀಡಿದ್ದಾರೆ.
 
ಪಾಕ್ ಪರ ಘೋಷಣೆ ವಿಚಾರದಲ್ಲಿ ಸಿಎಂ ಡಿಸಿಎಂ‌ ರಾಜೀನಾಮೆಗೆ ಆಗ್ರಹ ವಿಚಾರದ ಬಗ್ಗೆ ಮಾತನಾಡಿದ ಡಿಸಿಎಂ, ಯಾವಾಗ ಬೇಕಂತೆ ರಾಜೀನಾಮೆ ಕೊಡೋಣ. ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು. ಅವರನ್ನ ಯಾಕೆ ಬಂಧನ‌ ಮಾಡಲಿಲ್ಲ? ನಾವು ಘೋಷಣೆ ಕೂಗಿದವರ ವಿಚಾರಣೆ ಮಾಡುತ್ತಿದ್ದೇವೆ. ಬಿಜೆಪಿಯವರು ಕೇಸರಿ ಶಾಲು ಹಾಕಿ‌ ಘೋಷಣೆ ಕೂಗಿದ್ದಾರೆ. ಬಿಜೆಪಿಯವರಿಗೆ ಬದ್ಧತೆ ಇದೆಯಾ ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ