ಇಂದಿನಿಂದ ಅ.11ರವರೆಗೆ ರಾಜ್ಯಾದ್ಯಂತ ಬಾರಿ ಮಳೆಯಾಗುವ ಸಾಧ್ಯತೆ

ಭಾನುವಾರ, 9 ಅಕ್ಟೋಬರ್ 2022 (19:43 IST)
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಅ.11ರವರೆಗೆ ಬಾರಿ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು, ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ