ಇಂದು ರಾಜ್ಯದಲ್ಲಿ ಮಳೆ ಅಬ್ಬರ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇಂದು ಬೆಂಗಳೂರು, ಮಲೆನಾಡು, ಕರಾವಳಿಯ ಕೆಲವೆಡೆ ಮಳೆಯಾಗಲಿದೆ ಎನ್ನಲಾಗಿದೆ.