ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಇದೆ- ಸಿದ್ದರಾಮಯ್ಯ ಕಿಡಿ

ಬುಧವಾರ, 21 ಆಗಸ್ಟ್ 2019 (11:54 IST)
ಬಾದಾಮಿ : ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಾದಾಮಿಯಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪ್ರದೇಶಗಳ ನಿರ್ವಹಣೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರ ವಿಫಲವಾಗಿದೆ. ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದು ಪೈಸೆನೂ ಬಂದಿಲ್ಲ’ ಎಂದು ಕಿಡಿಕಾರಿದ್ದಾರೆ.


‘15 ದಿನ ಕಳೆದ್ರೂ ಮೋದಿ ಯಾವುದೇ ಪರಿಹಾರ ಘೋಷಿಸಿಲ್ಲ. ಕೇಂದ್ರದಿಂದ ಪರಿಹಾರ ತರಿಸುವಲ್ಲಿ ಸಿಎಂ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ