ಜೆಡಿಎಸ್‌ನೊಂದಿಗೆ ಯಾವುದೇ ಮೈತ್ರಿಯಿಲ್ಲ: ಸಿಎಂ ಸ್ಪಷ್ಟನೆ

ಗುರುವಾರ, 4 ಮೇ 2017 (20:20 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಒಡೆಯುವ ಪ್ರಯತ್ನ ನಡೆಸಿದ್ದಾರೆ ಎನ್ನುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು , ಅಂತಹ ಯಾವುದೇ ಬೆಳವಣಿಗೆಗಳು ತಮಗೆ ತಿಳಿದಿಲ್ಲ ಎಂದು ತಳ್ಳಿಹಾಕಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಭವಿಷ್ಯ ನುಡಿದರು.
 
ಹಿಂದೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆಸಿದ ಭ್ರಷ್ಟಾಚಾರಗಳನ್ನು ಜನೆ ನೋಡಿದ್ದಾರೆ. ಆದ್ದರಿಂದ, ರಾಜ್ಯದ ಜನತೆ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ನಿರ್ಧರಿಸಿದ್ದಾರೆ ಎಂದು ತಿರುಗೇಟು ನೀಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ