ಮುಂದಿನ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ– ಎಚ್.ಡಿ.ರೇವಣ್ಣ
ಮಂಗಳವಾರ, 2 ಜನವರಿ 2018 (12:48 IST)
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದ್ದಾರೆ.
ಸ್ವಂತ ಬಲದಲ್ಲಿ ಅಧಿಕಾರ ರಚಿಸಲು ಅವಕಾಶ ಸಿಗದೇ ಹೋದರೆ ಪ್ರತಿಪಕ್ಷದಲ್ಲಿ ಕೂಡುತ್ತೇವೆ. ಇದನ್ನು ಈಗಾಗಲೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಣ್ಣ ಸಣ್ಣ ಪಕ್ಷಗಳನ್ನು ಒಡೆಯುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಆದ ಪರಿಸ್ಥಿತಿ ರಾಜ್ಯದಲ್ಲೂ ಮರುಕಳಿಸಲಿದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.