ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ: ಸಿಎಂ ಸಿದ್ದರಾಮಯ್ಯ
ಭಾನುವಾರ, 16 ಏಪ್ರಿಲ್ 2017 (13:11 IST)
ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ. ಹಿಂದುತ್ವದ ಧ್ರುವಿಕರಣ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಗೆ ಇಂದಿನಿಂದಲೇ ಸಿದ್ದತೆ ಆರಂಭಿಸಲಾಗುತ್ತಿದೆ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ತಿಳಿಸಿದ್ದಾರೆ.
ಈ ಹಿಂದೆ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಿರಲಿಲ್ಲ. ಆದ್ದರಿಂದ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು ಎಂದರು.
ರಾಜ್ಯದಲ್ಲಿ ರೈತರ 52 ಸಾವಿರ ಕೋಟಿ ರೂಪಾಯಿಗಳ ಸಾಲವಿದೆ. ಸಾಲ ಮನ್ನಾದಿಂದ ಎಲ್ಲಾ ರೈತರಿಗೆ ಅನುಕೂಲವಾಗಬೇಕು. ಸಾಲ ಮನ್ನಾ ಬಗ್ಗೆ ಬಿಜೆಪಿ ನಾಯಕರು ಪ್ರಧಾನಿ ಮೋದಿಯ ಎದುರು ಚಕಾರವೆತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರಕಾರದ ನೋಟ್ ಬ್ಯಾನ್ ಯಶಸ್ವಿಯಾಗಿಲ್ಲ. ನೋಟ್‌ಬ್ಯಾನ್‌ನಿಂದ ದೇಶದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.