ಮಕ್ಕಳು ಶೈಕ್ಷಣಿಕವಾಗಿ ಈಗಾಗಲೇ ಸಾಕಷ್ಟು ಕಳೆದುಕೊಂಡಿದ್ದಾರೆ. ಮತ್ತಷ್ಟು ಕಳೆದುಕೊಳ್ಳುವುದು ಬೇಡ.
ಆನ್ಲೈನ್ ಕ್ಲಾಸ್ಗಳು ಭೌತಿಕ ತರಗತಿಗಳಷ್ಟು ಪರಿಣಾಮಕಾರಿಯಾಗಿರುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಓದು, ಬರಹ ಕಳೆದುಕೊಂಡು ಹಿಂದುಳಿದಿದ್ದಾರೆ. ಹೀಗಾಗಿ ಭೌತಿಕ ತರಗತಿಗಳನ್ನು ನಿಲ್ಲಿಸುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಹೇಳಿದರು.
ಶಾಲೆ, ಪಿಯು ಕಾಲೇಜುಗಳಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಬಂದರೂ ಎಲ್ಲ ಮಕ್ಕಳಿಗೆ ಪರೀಕ್ಷೆ ಮಾಡಿಸಬೇಕು. ಮಕ್ಕಳಿಗೆ ಅಗತ್ಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಶಾಲೆಯನ್ನು ಸ್ವಚ್ಛಗೊಳಿಸಿ ನಿಯಮದಂತೆ ಭೌತಿಕ ತರಗತಿಗಳಿಗೆ ರಜೆ ಘೋಷಿಸಬೇಕು.
ಮಕ್ಕಳು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.