ಕತಾರ, ನಾರ್ವೆಯಿಂದ ಬಂದವರಲ್ಲಿ ಕೊರೊನಾ ವೈರಸ್ ಇಲ್ಲ

ಭಾನುವಾರ, 8 ಮಾರ್ಚ್ 2020 (18:45 IST)
ಕತಾರ ಮತ್ತು ನಾರ್ವೆ ದೇಶಗಳಿಂದ ಬಂದ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಇಲ್ಲ ಎಂಬುದು ದೃಢಪಟ್ಟಿದೆ.


ಬೀದರ್ ಜಿಲ್ಲೆಗೆ ಕತಾರ ಮತ್ತು ನಾರ್ವೆ ದೇಶಗಳಿಂದ ಬಂದ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ವಿ.ಜಿ.ರೆಡ್ಡಿ ತಿಳಿಸಿದ್ದಾರೆ.

ಕತಾರ ಮತ್ತು ನಾರ್ವೆ ದೇಶಗಳಿಂದ ಬಂದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಇರಬಹುದೆಂದು ಶಂಕಿಸಿ ಬೀದರ್ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್‍ನಲ್ಲಿ ದಾಖಲೆ ಮಾಡಿಕೊಳ್ಳಲಾಗಿತ್ತು. ಬಳಿಕ ಇವರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಂತೆ ಬಂದಿರುವ ವರದಿ ಪ್ರಕಾರ ಶಂಕಿತರು ಸೋಂಕು ರಹಿತರಾಗಿದ್ದಾರೆಂದು ಫಲಿತಾಂಶ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಾದ್ಯಂತ ಸಾರ್ವಜನಿಕರಲ್ಲಿ ಪ್ರಸ್ತುತ ಕೊರೊನಾ ವೈರಸ್ ಸೋಂಕಿನ ಭಯ ಅತಿ ಹೆಚ್ಚಾಗಿದ್ದು, ಆದರೆ ಜಿಲ್ಲೆಯಲ್ಲಿ ಸಾರ್ವಜನಿಕರು ಸದರಿ ಸೋಂಕಿನ ಕುರಿತು ಭಯ ಪಡುವ ಅವಶ್ಯಕತೆ ಇರುವುದಿಲ್ಲ. ಆದರೆ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸೋಂಕು ತಗಲದಂತೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ