ಯಡಿಯೂರಪ್ಪ ವಿರುದ್ಧ ಭಿನ್ನಾಭಿಪ್ರಾಯವಿಲ್ಲ: ಶೆಟ್ಟರ್ ಸ್ಪಷ್ಟನೆ

ಶನಿವಾರ, 15 ಅಕ್ಟೋಬರ್ 2016 (14:36 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ನನ್ನ ಮಧ್ಯೆ ಜಗಳ ತಂದಿಡುವ ಪ್ರಯತ್ನ ನಡೆಯುತ್ತಿದೆ. ನಮ್ಮಿಬ್ಬರ ಮಧ್ಯ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಾವು ಒಂದಾಗಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಮೂಲಕ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
 
ಕೆ.ಶಿವರಾಂ ಬಿಜೆಪಿ ಸೇರ್ಪಡೆಗೆ ವಿರುದ್ಧವಿಲ್ಲ......
 
ನಿವೃತ ಐಎಎಸ್ ಅಧಿಕಾರಿ ಹಾಗೂ ದಲಿತ ನಾಯಕ ಕೆ.ಶಿವರಾಂ ಬಿಜೆಪಿ ಸೇರ್ಪಡೆಗೆ ನಮ್ಮ ವಿರೋಧವಿಲ್ಲ. ವೈಯಕ್ತಿಕ ಕಾರಣಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಮಜಾಯಿಸಿ ಕೊಟ್ಟರು.
 
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ದಲಿತ ನಾಯಕ ಕೆ.ಶಿವರಾಂ ಬಿಜೆಪಿ ಸೇರ್ಪಡೆ ವಿಷಯ ಕುರಿತಂತೆ ರಾಜ್ಯ ಬಿಜೆಪಿ ಪಾಳಯದಲ್ಲಿ ಭಿನ್ನಮತ ಶುರುವಾಗಿತ್ತು. ಈಶ್ವರಪ್ಪ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ನಾಯಕರು ನಿನ್ನೆಯ ಕಾರ್ಯಕ್ರಮಕ್ಕೆ ಗೈರುಹಾಜರಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ