ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುವ ಕಾಲ ದೂರ ಇಲ್ಲ- ಸಿಎಂ ಯಡಿಯೂರಪ್ಪ

ಶನಿವಾರ, 26 ಅಕ್ಟೋಬರ್ 2019 (11:10 IST)
ಹುಬ್ಬಳ್ಳಿ : ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ? ಕಾಂಗ್ರೆಸ್ ಮುಕ್ತ ಮಾಡುವ ಕಾಲ ಬಹಳ ದೂರ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.




ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.5ರಂದು ರಾಜ್ಯದ 15  ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನಲೆ ಈ ಸಂಬಂಧ ಇಂದು ಸಭೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಜನರು ಅತಿವೃಷ್ಟಿಯಿಂದ ನೊಂದಿದ್ದಾರೆ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.


ಸ್ಪೀಕರ್ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡಿದ್ದಾರೆ. ಇತಿಹಾಸದಲ್ಲಿ ಸ್ಪೀಕರ್ ಬಗ್ಗೆ ಈ ರೀತಿ ಯಾರು ಮಾತಾಡಿಲ್ಲ. ನಾಲಿಗೆ ಬಿಗಿ ಹಿಡಿದು ವಿಪಕ್ಷ ನಾಯಕರಾಗಿ ಕೆಲಸ ಮಾಡಲಿ.  ಸಿದ್ದರಾಮಯ್ಯ ಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ