ಮೈತ್ರಿ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ

ಸೋಮವಾರ, 11 ಸೆಪ್ಟಂಬರ್ 2023 (19:45 IST)
ಬಿಜೆಪಿ -ಜೆಡಿಎಸ್​​ ಮೈತ್ರಿ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.. ಇದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ಮಾಜಿ ಸಿಎಂ ಬಸವರಾಜ ಬೊಮ್ಮಯಿ ಸ್ಥಳೀಯವಾಗಿ ಮೈತ್ರಿ ಬಗ್ಗೆ ಹೇಳಿರಬಹುದು.. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೂ ನಾನು ಏನನ್ನೂ ಹೇಳುವುದಿಲ್ಲ ಎಂದು ತಿಳಿಸಿದ್ರು.. ಇನ್ನು ಪ್ರಧಾನಿ ನರೇಂದ್ರ ಮೋದಿಯವರನ್ನ ವಿರೋಧ ಮಾಡುವ ಭರದಲ್ಲಿ ಕಾಂಗ್ರೆಸ್​ ನಾಯಕರು ದೇಶವನ್ನೇ ವಿರೋಧ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ