ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ-ಸಿದ್ದರಾಮಯ್ಯ

ಬುಧವಾರ, 7 ಜೂನ್ 2023 (18:00 IST)
ನಮ್ಮ ಸರ್ಕಾರ ಸರ್ವರಿಗೂ ಸಮಪಾಲು ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು,ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ , 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ ಎಂದು ಹೇಳಿದ್ರು
 
ಅಲ್ಲದೇ ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ಸಿದ್ದರಾಮಯ್ಯ ನಿವೇದಿಸಿಕೊಂಡರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ