ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಸ್ತಾಪವಿಲ್ಲ: ಸಿಎಂ ಸಿದ್ದರಾಮಯ್ಯ

ಸೋಮವಾರ, 10 ಅಕ್ಟೋಬರ್ 2016 (11:32 IST)
ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಈ ಕುರಿತು ಮಠದ ಕೆಲ ಭಕ್ತರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ನಮ್ಮ ಅಭಿಪ್ರಾಯ ಕೇಳಿದೆ. ಮುಂದಿನದ್ದು ಕಾನೂನು ತಜ್ಞರು ನೋಡಿಕೊಳ್ಳಲಿದ್ದಾರೆ ಎಂದರು. 
 
ಆಡಳಿತಾಧಿಕಾರಿ ನೇಮಕ ವಿಚಾರ ಕೇಳಿ ಬಂದ ಬಳಿಕ ಮಠದ ಭಕ್ತರು ಧರಣಿ ನಡೆಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸರಕಾರ ಯಾವುದೇ ಕಾರಣಕ್ಕೂ ಆಡಳಿತಾಧಿಕಾರಿ ನೇಮಕ ಮಾಡಬಾರದು. ಸ್ವಾಮೀಜಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅಧಿಕಾರಿ ನೇಮಕ ಮಾಡುವ ಅಗತ್ಯ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದರು. 
 
ಕಾವೇರಿ ನದಿ ನೀರಿಗೆ ವಿಷಯದಲ್ಲಿ ಕೇಂದ್ರ ತಂಡಕ್ಕೆ ರಾಜ್ಯದ ಪರಿಸ್ಥಿತಿ ಅರ್ಥವಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ